ಭೂಕುಸಿತ ಸಾಧ್ಯತೆ: ಆಗುಂಬೆ ಘಾಟ್ ನಲ್ಲಿ ಸೆ.30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ:ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 15 ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಮೂರೂವರೆ ತಿಂಗಳ ಕಾಲ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಇರುವುದಿಲ್ಲ. ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಆಗುಂಬೆ ಘಾಟ್ 169ಎ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಮಲ್ಪೆ ಆಗುಂಬೆ ಹೆದ್ದಾರಿಯ ಭಾಗವಾಗಿರುವ ಆಗುಂಬೆ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಭಾರೀ ವಾಹನಗಳು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಶಿವಮೊಗ್ಗ ಜಿಲ್ಲಾಡಳಿತ ಸೂಚಿಸಿದೆ.

More articles

Latest article

Most read