ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದರು.
ಅವರು ಇಂದು ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿ ಮಾತನಾಡಿದರು.
ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ಆದರೆ ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರಲ್ಲಿ ಜಾತಿ ಗಣತಿಯೂ ಒಳಗೊಂಡಿದೆ ಎಂದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.