ಕರ್ನಾಟಕದಲ್ಲಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಬಿಡುಗಡೆಗೆ ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ:  ಕರ್ನಾಟಕದಲ್ಲಿ ನಟ ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಈ ಚಿತ್ರದ ನಟ ಕಮಲ್‌ ಹಾಸನ್‌ ನೀಡಿದ್ದ ಹೇಳಿಕೆ ನಂತರ ಥಗ್‌ ಲೈಫ್‌ ಬಿಡುಗಡೆಗೆ ಕರ್ನಾಟಕದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆಗೆ ಕರ್ನಾಟಕ ಅಡ್ಡಿಪಡಿಸುತ್ತಿರುವ ಬಗ್ಗೆ ಥಗ್‌ ಲೈಫ್‌ ನಿರ್ಮಾಪಕರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ  ಸುಪ್ರೀಂ ಕೋರ್ಟ್ ಮಂಗಳವಾರ ಹಸಿರು ನಿಶಾನೆ ತೋರಿಸಿದೆ.

ಗೂಂಡಾಗಿರಿ ನಡೆಸಿ ಬೀದಿಗೆ ಬಂದು ಆಕ್ರಮಣ ಮಾಡಲು ಸಾಧ್ಯವಿಲ್ಲ, ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬೇಕು. ಸಿಬಿಎಫ್‌ ಸಿ ಸರ್ಟಿಫಿಕೇಟ್ ಇದ್ದ ಚಿತ್ರವನ್ನು ಪ್ರತಿ ರಾಜ್ಯದಲ್ಲೂ ಬಿಡುಗಡೆ ಮಾಡಬೇಕು ಎಂದು ಕಾನೂನಿನ ನಿಯಮ ಹೇಳುತ್ತದೆ. ಚಿತ್ರ ಬಿಡುಗಡೆಗೆ ತಡೆ ನೀಡಿ ಜನರನ್ನು ಭಯಭೀತರನ್ನಾಗಿ ಮಾಡುವುದು, ಚಿತ್ರಮಂದಿರಗಳನ್ನು ಸುಡುವ ಬೆದರಿಕೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ್ ಹಾಸನ್ ಅವರಿಂದ ಕರ್ನಾಟಕ ಹೈಕೋರ್ಟ್ ಕ್ಷಮೆಯಾಚನೆ ಕೇಳಬಾರದಿತ್ತು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ ‘ಥಗ್ ಲೈಫ್’ ಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ನಾಳೆಯೊಳಗೆ ಕರ್ನಾಟಕ ತನ್ನ ಅಭಿಪ್ರಾಯವನ್ನು  ದಾಖಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಉಜ್ಜಲ್‌ ಭುಯಾನ್‌ ಮತ್ತು ಮನ್‌ ಮೋಹನ್‌ ಅವರ ಪೀಠ ನಿರ್ದೇಶನ ನೀಡಿದೆ.

More articles

Latest article

Most read