ಗೋಪಾಲ್‌ ಪುರ ಬೀಚ್‌: 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಅರೋಪಿಗಳ ಬಂಧನ

Most read

ಭುವನೇಶ್ವರ: ಒಡಿಶಾದ ಸುಪ್ರಸಿದ್ಧ ಗೋಪಾಲ್‌ ಪುರ ಬೀಚ್‌ ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಯು, ತನ್ನ ಸಹಪಾಠಿ ಗೆಳಯನೊಂದಿಗೆ ರಾಜಹಬ್ಬದ ಪ್ರಯುಕ್ತ ಬೀಚ್‌ ಗೆ ತೆರಳಿದ್ದ ವೇಳೆ ಭಾನುವಾರ ರಾತ್ರಿ ಈ ದುರಂತ ಘಟನೆ ನಡೆದಿದೆ. ಉಪ ಮುಖ್ಯಮಂತ್ರಿ ಪ್ರವತಿ ಪರಿದಾ ಅವರು, ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರಂಭದಲ್ಲಿ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸಲಾಗಿತ್ತು. ನಂತರ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಸರವಣ ವಿವೇಕ್ ಎಂ. ಅವರಿಗೆ ಸರ್ಕಾರ ಸೂಚಿಸಿದೆ.

More articles

Latest article