ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ. ಸುರೇಶ್ ಅವರು ಕೆಎಂಎಫ್ ಅದ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು ರೈತರು ಮತ್ತು ಹಾಲು ಒಕ್ಕೂಟಗಳು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷ ಸ್ಥಾನದಲ್ಲಿ ಇರುವವರೆಗೆ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ಹೇಳಿದ್ದಾರೆ.
ಹೈನುಗಾರಿಕೆ ಅಭಿವೃದ್ಧಿಗೆ ನಾನು ಹೆಚ್ಚಿನ ಗಮನ ಕೊಡುತ್ತೇನೆ ಮತ್ತು ರೈತರಿಗೆ ಅನುಕೂಲ ಮಾಡುತ್ತೇನೆ. ನನ್ನ ಆಯ್ಕೆ ಮಾಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಅವರ ಎದುರು ಸೋತ ನಂತರ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಇದೀಗ ಮರಳೀ ಸಕ್ರಿಯ ರಾಜಕಾರಣಕ್ಕೆ ಮರಳಿದಾರೆ.
ಒಟ್ಟು 14 ನಿರ್ದೇಶಕರನ್ನ ಒಳಗೊಂಡಿರುವ ಬಮೂಲ್ ನಲ್ಲಿ , 11ಮಂದಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದಾರೆ. ಈಗಾಗಲೇ ಡಿಕೆ ಸುರೇಶ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ನಿರ್ದೇಶಕ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವಿರೋಧವಾಗಿ ಆ ಸ್ಥಾನಕ್ಕೂ ಅಯ್ಕೆಯಾಗಿದ್ದಾರೆ.