ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಆಮೀರ್ ಖಾನ್  ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದಾಗ ಅಲ್ಲಿ ಆಕಸ್ಮಿಕವಾಗಿ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್  ಅವರನ್ನು ಭೇಟಿಯಾದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿ, ಶುಭ ಹಾರೈಸಿದರು.

ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ನವದೆಹಲಿ ತೆರಳಿದ್ದರು. ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಮುಖಾಮುಖಿಯಾದರು. ರಾಜ್ಯದ ಕೆಲವು ಮಸೂದೆಗಳಿಗೆ ಅಂಕಿತ ಹಾಕುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಲು ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಲಿದ್ದಾರೆ.

More articles

Latest article

Most read