ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 10 ಕಾರ್ಮಿಕರ ಸಾವು

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಿಯಾಕ್ಟರ್‌ ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ನಾಹುತ ಸಂಭವಿಸಿದೆ. ಈ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಸಾಧ್ಯತೆಗಳಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯು ನೋಡು ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಕಾರ್ಖಾನೆಯ ತುಂಬ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

More articles

Latest article

Most read