ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ ಪಿ ಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಆದರೆ ಗೃಹ ಬಳಕೆಯ 14 ಕೆಜಿ ಎಲ್ ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪ್ರತಿ ತಿಂಗಳ ಒಂದನೇ ತಾರೀಖಿನಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್ ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ತಿಂಗಳಲ್ಲಿ ದೇಶಾದ್ಯಂತ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಕಡಿಮೆ ಮಾಡಲಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.
19 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ರೂ.58.50 ರಷ್ಟು ಕಡಿಮೆ ಮಾಡಲಾಗಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ದರ 1,665 ರೂ, ಮತ್ತು ಕೋಲ್ಕತ್ತಾದಲ್ಲಿ 1769 ರೂ.ಗಳಿಗೆ ಇಳಿದಿದೆ. ಇಂದಿನಿಂದಲೇ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ.
ಬೆಲೆ ಇಳಿಕೆಗೂ ಮುನ್ನ ವಾಣಿಜ್ಯ ಸಿಲಿಂಡರ್ ಬೆಲೆ 1826 ರೂ.ಗಳಷ್ಟಿತ್ತು.