ನಾಳೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತ್ತು ರದ್ದು ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

Most read

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತ್ತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿರುವ ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳಲಿದೆ.

ಇಂದು ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ ಮೇಲ್ಮನವಿಗೆ ಸಂಬಂಧಿಸಿದಂತೆ ಅರ್ಜಿಯ ತುರ್ತು ವಿಚಾರಣೆಗೆ ಇಂದೇ ಕೈಗೆತ್ತಿಕೊಳ್ಳಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಜುಲೈ 3, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿತು.

More articles

Latest article