ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ್ ಸಿಂಗ್ ಹೆಸರು, ಎತ್ತಿನ ಹೊಳೆ ಯೋಜನೆಗೆ ಹೆಚ್ಚುವರಿ ಅನುದಾನ: ಸಿಎಂ ಸಿದ್ದರಾಮಯ್ಯ

Most read

ಚಿಕ್ಕಬಳ್ಳಾಪುರ: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ‌ಮತ್ತು ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಹೆಸರನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಟ್ಟು 48 ವಿಷಯಗಳನ್ನು ಕುರಿತು ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್. ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ವಿಭಾಗಕ್ಕೆ ರೂ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ ಎಂದರು.

ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ ನೀಡಲಾಗುತ್ತದೆ. 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ ಎಂದರು.

ರೂ. 9807 ಕೋಟಿ ಮೊತ್ತದ ಯೋಜನೆಯಲ್ಲಿ ಕಾಲುವೆ ಕೆಲಸ ಶೇ.85 ರಷ್ಟು ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ ರೂ. 8000 ಕೋಟಿ ಬೇಕಾಗಿದೆ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದರು.

ನಾವು ಆಡಳಿತವನ್ನು  ಬೆಂಗಳೂರು ಕೇಂದ್ರಿತ ಎಂಬುದನ್ನು  ತಪ್ಪಿಸಿ  ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು  ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ  ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು ಎಂದು ತಿಳಿಸಿದರು. ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ  ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟದ ಇತರೆ ನಿರ್ಣಯಗಳು:

*ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ

*ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.

*ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು

*PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ

*ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು.

*ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ  ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ.

*ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ.

*ನೀರಾವರಿ ಯೋಜನೆಗಳಿಗೆ 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು  ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ  164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು  10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ.

 *ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5  ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ  ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

*123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ  ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

More articles

Latest article