ಕೋಲಾರ. ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಅವರ ತೋಟದಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಂಗಮ್ಮ (46)ಎಂದು ಗುರುತಿಸಲಾಗಿದೆ.
ರಮೇಶ್ ಕುಮಾರ್ ಅವರಿಗೆ ಸೇರಿದ ಅಡ್ಡಗಲ್ ನ ತೋಟದಲ್ಲಿ ಮಂಗಮ್ಮ ಕೆಲಸ ಮಾಡುತ್ತಿದ್ದರು. ಆಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಗೌನಿಪಲ್ಲಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.