ರಾಯಚೂರು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅಧಿಕಾರ ಸ್ವೀಕಾರ

Most read

ರಾಯಚೂರು: ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡದ ಪ್ರಮುಖ ಲೇಖಕರು ಮತ್ತು ಸಂಶೋಧಕರಾಗಿರುವ ಅವರು, ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾಗಿದ್ದರು.

ಮೂಲತಃ ಹಾವೇರಿ ಜಿಲ್ಲೆಯವರಾದ ಕೆಳಗಿನಮನಿಯವರು 28 ವರ್ಷಗಳ ಸುದೀರ್ಘ ಬೋಧನಾನುಭವ ಹೊಂದಿದ್ದಾರೆ. ಇವರು  ಇದುವರೆಗೆ 50 ಸಂಶೋಧನಾ ಕೃತಿಗಳು, 14 ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ. ಹಲವಾರು ವಿದ್ಯಾರ್ಥಿಗಳಿಗೆ ಎಂಫಿಲ್ ಮತ್ತು ಪಿಎಚ್‌ ಡಿ ಮಾರ್ಗದರ್ಶನ ಮಾಡಿದ್ದಾರೆ. ಕುವೆಂಪು ವಿ.ವಿ.ಯ ಪ್ರಸಾರಾಂಗದ ನಿರ್ದೇಶಕರಾಗಿ, ದೂರ ಶಿಕ್ಷಣ ಕೇಂದ್ರದ ಸಂಚಾಲಕರಾಗಿ, ಹಲವಾರು ವಿಶ್ವವಿದ್ಯಾಲಯಗಳ ಪರೀಕ್ಷಕ ಮಂಡಳಿ ಮತ್ತು ಅಧ್ಯಯನ ಮಂಡಳಿಗಳ ಸದಸ್ಯರಾಗಿ ಕಾರ್ಯ ನಿರ್ವಹಿಸಿ ಅಪಾರ ಅನುಭಗ ಗಳಿಸಿದ್ದಾರೆ.

ಹಾ.ಮಾ.ನಾಯಕ್ ಟ್ರಸ್ಟ್, ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಗಳ ಸದಸ್ಯರಾಗಿ, ಪ್ರೊ.ತೇಜಸ್ವಿ ಕಟ್ಟೀಮನಿ  ಟ್ರಸ್ಟಿನ ಉಪಾಧ್ಯಕ್ಷರಾಗಿಯೂ ಗಮನಾರ್ಹ ಕೆಲಸ ಮಾಡಿದ್ದಾರೆ. ಇವರ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಫ.ಗು.ಹಳಕಟ್ಟಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಗೌರವಗಳು ಸಂದಿವೆ.

More articles

Latest article