ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳ ಸೇರ್ಪಡೆ ಇಲ್ಲ; ಶೀಘ್ರ ಚುನಾವಣೆ ಭರವಸೆ ನೀಡಿದ ಡಿಕೆ ಶಿವಕುಮಾರ್‌

Most read

ಬೆಂಗಳೂರುಗ್ರೇಟರ್‌ ಬೆಂಗಳೂರು ರಚನೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ರಚನಾ ಸಮಿತಿ ಅಧ್ಯಕ್ಷ ರಿಜ್ವಾನ್‌ ಅರ್ಷದ್‌ ಅವರು ಇಂದು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದರು.

ವರದಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಗ್ರೇಟರ್‌ ಬೆಂಗಳೂರಿಗೆ ಮತ್ತಷ್ಟು ಪ್ರದೇಶಗಳನ್ನು ಮುಂದಿನ ವರ್ಷಗಳಲ್ಲಿ ಸೇರ್ಪಡೆ ಮಾಡಲಾಲಾಗುವುದು. ಸದ್ಯಕ್ಕೆ ಯಾವುದೇ ಹೊಸ ಪ್ರದೇಶಗಳ ಸೇರ್ಪಡೆ ಮಾಡುವುದಿಲ್ಲ. ಈಗಿರುವ ಬಿಬಿಎಂಪಿಯನ್ನೇ ಗ್ರೇಟರ್‌ ಬೆಂಗಳೂರನ್ನಾಗಿ ರಚಿಸಿ ಚುನಾವಣೆ ನಡೆಸುವುದಾಗಿ ತಿಳಿಸಿದರು.

ಎತ್ತಿನಹೊಳೆ ಯೋಜನೆ ಕುರಿತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಯೋಜನೆ ಕೈಗೊಳ್ಳಬೇಕೆಂಬುದು ಅವರ ಬಯಕೆಯಾಗಿದೆ. ನೈಸರ್ಗಿಕವಾಗಿ ಇಲ್ಲಿ ನೀರಿನ ಹರಿವಿದೆ. ಹೀಗಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯ ಎಂದರು.

ನಾಳೆ ದೆಹಲಿಗೆ ತೆರಳುತ್ತಿದ್ದು ಎತ್ತಿನಹೊಳೆ ಯೋಜನೆಗೆ ಸಂಬಂಧಪಟ್ಟಂತೆ ತುಮಕೂರು ಮತ್ತು ಹಾಸನದಲ್ಲಿನ ಕಾಮಗಾರಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿಗಾಗಿ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದೇನೆ. ಜೊತೆಗೆ ಕೇಂದ್ರ ಜಲಶಕ್ತಿ ಸಚಿವರ ಜೊತೆಗೂ ಚರ್ಚಿಸುವುದಾಗಿ ಹೇಳಿದರು. ಈ ವೇಳೆ ಪಕ್ಷದ ಕಚೇರಿಗೆ ಭೇಟಿ ನೀಡಿ ಹೈಕಮಾಂಡ್‌ ನಾಯಕರೊಂದಿಗೆ ಚರ್ಚೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ ಎಂದರು.

More articles

Latest article