ತೆಲಂಗಾಣ: ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥ, ಅಸ್ಪತ್ರೆಗೆ ದಾಖಲು

Most read

ಹೈದರಾಬಾದ್: ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ತೆಲಂಗಾಣದ ಕುಕಟ್ ಪಲ್ಲಿ ಎಂಬಲ್ಲಿ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕುಕಟ್ ಪಲ್ಲಿ ಪ್ರದೇಶದ ಜನರಲ್ಲಿ ತೀವ್ರ ಕರುಳು ಉರಿಯೂತ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಅಸ್ವಸ್ಥರು ಕಲಬೆರಕೆ ಸೇಂದಿ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜನರಸಿಂಹ ತಿಳಿಸಿದ್ದಾರೆ. ಅಸ್ವಸ್ಥಗೊಂಡವರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಬಿಹಾರದ ಸಿವಾನ್‌ ಮತ್ತು ಸಾರಣ್‌ ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ 35ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

More articles

Latest article