ಎಲ್‌ ಕೆಜಿ- ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ: ಡಿಸಿಎಂ ಡಿಕೆ ಶಿವಕುಮಾರ್‌

Most read

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.. ಈ ಮೂಲಕ ಬಡ ಮಕ್ಕಳಿಗೆ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಬಲ ನೀಡುತ್ತಿದ್ದೇವೆ. ಜತೆಗೆ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನು ಒದಗಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ದೊಡ್ಡ ಸಹಾಯವಾಗಲಿದೆ.

More articles

Latest article