ದೇವನಹಳ್ಳಿ ಬಳಿ ಭೂಮಿ ಕೊಡಲು ಸಿದ್ಧ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರ ಮತ್ತೊಂದು ಗುಂಪು

Most read

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ನೀಡಲು ಸಿದ್ಧವಿರುವುದಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ ಹೆಸರಿನಲ್ಲಿ ಮನವಿ ಪತ್ರ ಸಲ್ಲಿಸಿರುವ ಅವರು ಭೂಸ್ವಾಧೀನಕ್ಕಾಗಿ ನಾಲ್ಕು ಷರತ್ತುಗಳನ್ನು ವಿಧಿಸಿದ್ದಾರೆ.

ಪ್ರತಿ ಎಕರೆಗೆ ರೂ.3.50 ಕೋಟಿಗಳ ದರ ನಿಗಧಿ ಪಡಿಸಬೇಕು. ಜಮೀನು ಕಳೆದುಕೊಂಡ ರೈತ ಮಕ್ಕಳಿಗೆ ಅವರ ಶಿಕ್ಷಣಕ್ಕೆ ಅನುಗುಣವಾಗಿ ಉದ್ಯೋಗ ನೀಡಬೇಕು. ಯಾವುದೇ ಕಾರಣಕ್ಕೂ ಹಸಿರು ವಲಯವಾಗಿ ಪರಿವರ್ತಿಸಬಾರದು ಮತ್ತು ಗ್ರಾಮದ ಅಕ್ಕಪಕ್ಕ ಉಳಿದ ಜಮೀನುಗಳನ್ನು ಹಳದಿ ವಲಯವನ್ನಾಗಿ ಪರಿವರ್ತಿಸಬೇಕು ಎಂದು ಕೋರಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಕೆ ಎಚ್ ಮುನಿಯಪ್ಪ, ಬಿ ಎಸ್ ಸುರೇಶ್,  ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿದ್ದರು.

ಮತ್ತೊಂದು ಕಡೆ ಸಾವಿರಾರು ರೈತರು ತಮ್ಮ ಭೂಮಿಯನ್ನು ವಶಪಡಿಸಿಕೊಳ್ಳಬಾರದು ಎಂದು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.

More articles

Latest article