ಮಿಜೋರಾಂ: 112.40 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Most read

ಐಜ್ವಾಲ್: ಮ್ಯಾನ್ಮಾರ್‌ ಗಡಿ ಸಮೀಪದ ಮಿಜೋರಾಂ ರಾಜ್ಯದ ಚಂಫೈ ಜಿಲ್ಲೆಯ 112.40 ಕೋಟಿ ರೂ. ಮೌಲ್ಯದ ಎಂಡಿಎಂಎ ಅನ್ನು ಅಸ್ಸಾಂ ರೈಫಲ್ಸ್‌ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೋಖಾಲ್ತಾ‌ರ್ ಗ್ರಾಮದಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಇಬ್ಬರು ಭಾರೀ ಗಾತ್ರದ ಬ್ಯಾಗ್‌ ಗಳನ್ನು ಹೊತ್ತೊಯ್ಯುತ್ತಿದ್ದರು. ಈ ವೇಳೆ ಅನುಮಾನಗೊಂಡು ಪೊಲೀಸರು ಪರಿಶೀಲನೆ ನಡೆಸಿದಾಗ  ಅವರ ಬ್ಯಾಗ್‌ ಗಳಲ್ಲಿ ನಿಷೇಧಿತ ಎಂಡಿಎಂಎ ಡ್ರಗ್‌ ಇದ್ದದ್ದು ಪತ್ತೆಯಾಗಿದೆ.

ಅಸ್ಸಾಂ ರೈಫಲ್ಸ್ ಸಿಬ್ಬಂದಿ 3.33 ಲಕ್ಷ ನಿಷೇಧಿತ ಮಾದಕ ಪದಾರ್ಥ ಮೀಥೈಲ್ ಡಯಾಕ್ಸಿ ಮೆಥಾಂಫೆಟಮೈನ್ (ಎಂಡಿಎಂಎ) ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಇದರ ಮೌಲ್ಯ 112.40 ಕೋಟಿ ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಆರೋಪಿಗಳು ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಹರಿಯುವ ಟಿಯಾವು ನದಿಗೆ ಹಾರಿ ಮ್ಯಾನ್ಮಾರ್‌ ಗೆ ಪರಾರಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳು ಚಂಫೈ ಜಿಲ್ಲೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಆಗಮಿಸಿದ್ದರು. ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಮಿಜೋರಾಂ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

More articles

Latest article