ತೆರಿಗೆ ಹಂಚಿಕೆ ಸರಿಯಾಗಿ ಮಾಡಿ ಇಲ್ಲವೇ, ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ : ಡಿ.ಕೆ ಸುರೇಶ್

Most read

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಅವಾಗವಾಗ ಕೇಳಿಬರುತ್ತದೆ. ಆದರೆ ಈಗ ಈ ವಿಷಯವಾಗಿಯೇ  ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗ್ತಿದೆ ಎಂದು ಕಿಡಿಕಾರಿದ್ದಾರೆ.

ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದ್ರೇ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತದಲ್ಲಿ ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

ʼನಮ್ಮ ಕನ್ನಡದ ಫಲಕಗಳನ್ನು ಹಾಕುವುದಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ರೀತಿಯಲ್ಲಿ ಮುಂಬರುವ ರಾಜ್ಯಪಾಲರುಗಳು ನಡೆದುಕೊಂಡರೆ ನಮ್ಮ ರಾಜ್ಯಕ್ಕೆ ಮತ್ತು ಕನ್ನಡಿಗರಿಗೆ ಅಗೌರವ ಮಾಡಿದಂತೆʼ ಎಂದು ಗುಡುಗಿದ್ದಾರೆ.

More articles

Latest article