ಮಹದಾಯಿ, ಮೇಕೆದಾಟು ಯೋಜನೆಗಳು: ಬಿಜೆಪಿ ಸಂಸದರು ಒತ್ತಡ ಹೇರಬೇಕು: ಬಮುಲ್‌ ಅಧ್ಯಕ್ಷ ಡಿಕೆ ಸುರೇಶ್

Most read

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ನಡೆಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮಾಜಿ ಸಂಸದ ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಗೋವಾ ಹಲವು ವರ್ಷಗಳಿಂದ ವಿನಾಕಾರಣ ಗೊಂದಲ ಸೃಷ್ಠಿಸುತ್ತಾ ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆಗೆ ತೊಂದರೆಯುಂಟು ಮಾಡುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಗೋವಾ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕಕ್ಕೆಅನ್ಯಾಯ ಮಾಡುತ್ತಿರುವುದು ಎದ್ದು ಕಾಣುತ್ತಿದೆ ಎಂದು ಆಪಾದಿಸಿದರು.

ಕೇಂದ್ರ ಜಲಶಕ್ತಿ ಸಚಿವರು ಆದಷ್ಟು ತ್ವರಿತವಾಗಿ ಕುಡಿಯುವ ನೀರಿನ ಯೋಜನೆಗಳಾದ ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡಬೇಕು.ರಾಜ್ಯದ ಜನ ಬಿಜೆಪಿಗೆ ಸುಮಾರು 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ನೀಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮೂರು ಬಾರಿ ಅಧಿಕಾರಕ್ಕೆ ಬರಲು ಕರ್ನಾಟಕ ಜನರ ಕೊಡುಗೆ ಮಹತ್ತರವಾಗಿದೆ. ಆದರೂ ನಮ್ಮ ಸಂಸದರು, ಸಚಿವರು ಈ ವಿಚಾರವಾಗಿ ಚಕಾರ ಎತ್ತುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

More articles

Latest article