ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನ ಒಳಗೆ ಇಂದು ಆರನೇ ಸ್ಥಳದಲ್ಲಿ ಅಗೆಯುತ್ತಿದ್ದಾಗ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ. ಸತತ ಮೂರನೇ ದಿನವಾದ ಇಂದು ಧರ್ಮಸ್ಥಳ ಹತ್ಯೆಗಳ ಆರೋಪಕ್ಕೆ ಮಹತ್ವದ ಸಾಕ್ಷಿ ಲಭಿಸಿದಂತಾಗಿದೆ. ಅನಾಮಿಕ ಸಾಕ್ಷಿದಾರ ತೋರಿಸಿದ ಐದು ಜಾಗಗಳಲ್ಲಿ ಕಳೆದ ಎರಡು ದಿನಗಳಲ್ಲಿ ಯಾವುದೇ ಸಾಕ್ಷ್ಯಗಳು ಲಭ್ಯವಾಗಿರಲಿಲ್ಲ.
ಇಂದು ಆರನೇ ಜಾಗದಲ್ಲಿ ಕೆಲವು ಮೂಳೆಗಳು ಪತ್ತೆಯಾಗಿದ್ದು, ತ್ವರಿತವಾಗಿ ಫೊರೆನ್ಸಿಕ್ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ ಎಂದೂ ತಿಳಿದು ಬಂದಿದೆ.
ಕೆಲವೇ ಕ್ಷಣಗಳಲ್ಲಿ ಈ ಸ್ಥಳಕ್ಕೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಮಿಸಲಿದ್ದಾರೆ.
ಮಂಗಳವಾರ ಮತ್ತು ಬುಧವಾರ 5 ಜಾಗಗಳನ್ನು ಅಗೆದರೂ ಎಲ್ಲೂ ಮೃತದೇಹದ ಅವಶೇಷಗಳು ಪತ್ತೆಯಾಗಿರಲಿಲ್ಲ.