ನವದೆಹಲಿ: ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (81)ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೇಹಸ್ಥಿತಿ ಗಂಭೀರವಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜೆಎಂಎಂ ಪಕ್ಷದ ಮೂಲಗಳು ತಿಳಿಸಿವೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿರುವ ಸೊರೇನ್ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪುತ್ರ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ ಸೊರೇನ್ ಅವರಿಗೆ ಇಂದು ಮಿದುಳು ಆಘಾತವಾಗಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ದೆಹಲಿಗೆ ಸಾಗಿಸಲಾಗಿದೆ. ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.