ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿ ಹೆಣಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಎಸ್ ಐಟಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಆದರೆ ಅದಕ್ಕೂ ಮೊದಲು ತಜ್ಞರ ಅಭಿಪ್ರಾಯ ಪಡೆಯಲು ಎಸ್ ಐಟಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಮೇಲ್ವಿಚಾರಣೆಗಾಗಿ ಬೆಳ್ತಂಗಡಿಯಲ್ಲೇ ಬೀಡು ಬಿಟ್ಟಿರುವ ಎಸ್ ಐಟಿ ಮುಖ್ಯಸ್ಥ ಡಿಜಿಪಿ ಪ್ರಣಬ್ ಮೊಹಾಂತಿ ಅವರು, 13 ನೇ ಸ್ಥಳದ ಹತ್ತಿರ ವಿದ್ಯುತ್ ತಂತಿಗಳು ಹಾದು ಹೋಗಿವೆ ಮತ್ತು ಈ ಸ್ಥಳವು ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವುದರಿಂದ ರಾಡಾರ್ ವ್ಯವಸ್ಥೆ ಬಳಸಲು ಮುಂದಾಗಿದ್ದಾರೆ. ಅದಕ್ಕೂ ಮುನ್ನ ತಜ್ಞರ ಅಭಿಪ್ರಾಯ ಪಡೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.