ಧರ್ಮಸ್ಥಳದಲ್ಲಿ ಯೂಟ್ಯೂಬರ್‌ ಗಳ ಮೇಲೆ ಹಲ್ಲೆ; ನಟ ಪ್ರಕಾಶ್‌ ರಾಜ್ ಖಂಡನೆ

Most read

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‌ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ. ಇಂತಹ ಗೂಂಡಾಗಳಿಂದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ ಎಂದು ಒತ್ತಾಯಿಸಿದ್ದಾರೆ.

ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ?. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತರಬೇಕು ಎಂದು ಆಗ್ರಹಿಸಿದ್ದಾರೆ.

ದಯವಿಟ್ಟು ಪೊಲೀಸರು ಗೂಂಡಾಗಳನ್ನು ಬಂಧಿಸಬೇಕು. ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ಕ್ರಮ ಕೈಗೊಳ್ಳಬೇಕು. ನ್ಯಾಯ ಕೇಳುವುದು ನಮ್ಮ ಹಕ್ಕು ಕರ್ತವ್ಯ ಎಂದು ಪ್ರಕಾಶ್‌ ರಾಜ್‌ ಪ್ರತಿಪಾದಿಸಿದ್ದಾರೆ.

More articles

Latest article