ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಬರೋಬ್ಬರಿ 1ಲಕ್ಷ ನಕಲಿ ಮತದಾರರು!!! ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Most read

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ  “ಮತಗಳ್ಳತನ” ನಡೆದಿರುವುದನ್ನು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಅಕ್ರಮ ಕುರಿತು ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದರು.

ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ನೇರವಾಗಿ ಕೈಜೋಡಿಸಿದೆ. ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳಿವೆ.ಇದು ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ ಎಂದರು.

ಮಹದೇವಪುರ ಕ್ಷೇತ್ರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ 40,009 ಮತದಾರರಿದ್ದಾರೆ. ಮನೆ ಸಂಖ್ಯೆ 0 ಎಂಬ ವಿಳಾಸದಲ್ಲಿ ಭಾರಿ ಸಂಖ್ಯೆಯಲ್ಲಿ ಮತದಾರರು ದಾಯಿಸಿಕೊಂಡಿದ್ದಾರೆ. 46 ಮತದಾರರು ಒಂದೇ ಕೊಠಡಿಯ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ ಕೋಣೆಯಲ್ಲಿ ಯಾರೊಬ್ಬರೂ ವಾಸಿಸುತ್ತಿಲ್ಲ ಎನ್ನುವುದು ತಿಳಿದು ಬಂದಿದೆ. ನಕಲಿ ವಿಳಾಸಗಳನ್ನು ನಮೂದಿಸಿ 40,000 ಮತದಾರರನ್ನು ನೊಂದಾಯಿಲಾಗಿದೆ. ಭಾವಚಿತ್ರಗಳೇ ಇಲ್ಲದೆ  ಸುಮಾರು 4,000 ನೋಂದಾಯಿತ ಮತದಾರರು ಈ ಕ್ಷೇತ್ರದಲ್ಲಿ ನೊಂದಾಯಿಸಿಕೊಂಡಿದ್ದಾರೆ. ಹೀಗೆ ವಿವಿಧ ರೀತಿಯ ಒಂದು ಲಕ್ಷ ನಕಲಿ ಮತದಾರರು ಕಂಡು ಬಂದಿದ್ದಾರೆ ಎಂದು ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಕೇವಲ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಪುರಾವೆಗಳು ಲಭ್ಯವಾಗಿವೆ.  ಮಹಾರಾಷ್ಟ್ರ ಫಲಿತಾಂಶ ವಿಧಾನಸಭಾ ಚುನಾವಣೆಯನ್ನು ನಮ್ಮಿಂದ ಕದ್ದಿದೆ ಎಂಬ ನಮ್ಮ ಅನುಮಾನ ಖಚಿತವಾಗಿದೆ.ಮೆಶಿನ್‌ ರಿಡೇಬಲ್‌ ಮತದಾರರ ಪಟ್ಟಿಯನ್ನು ನೀಡಲು ಚುನಾವಣಾ ಆಯೋಗ ನಿರಾಕರಿಸಿರುವುದು ಬಿಜೆಪಿಯೊಂದಿಗೆ ಅದು ಒಪ್ಪಂದ ಮಾಡಿಕೊಂಡಿರುವುದು ಸಾಬೀತಾಗಿದೆ ಎಂದೂ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಅವರು ಅಂಕಿಅಂಶಗಳನ್ನು ಉಲ್ಲೇಖಿಸಿ ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ, ಕೇವಲ ಐದು ತಿಂಗಳೊಳಗೆ ಒಂದು ಕೋಟಿಗೂ ಹೆಚ್ಚು ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು.

ಮತಗಳ್ಳತನದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಹುಲ್‌ ಗಾಂಧಿ ಸೇರಿದಂತ ಅನೇಕ ನಾಯಕರು ಬಾಗವಹಿಸಲಿದ್ದಾರೆ.

More articles

Latest article