ಮತಕಳವು: ಕನ್ನಡದಲ್ಲಿ ಘೋಷಣೆ ಕೂಗಿದ ಪ್ರಿಯಾಂಕಾ ಗಾಂಧಿ

Most read

ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ.

ಬಿಹಾರದಲ್ಲಿ ಚುನಾವಣಾ ಆಯೋಗ ಅಕ್ರಮವಾಗಿ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ INDIA ಮೈತ್ರಿ ಪಕ್ಷಗಳು ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ, ಅವರು “ಬೇಡ, ಬೇಡ… SIR ಬೇಡ” ಎಂಬ ಘೋಷಣೆ ಕೂಗಿ, ಇತರರನ್ನೂ ಕನ್ನಡದಲ್ಲಿ ಘೋಷಣೆಗಳನ್ನು ಕೂಗುವಂತೆ ಉತ್ತೇಜಿಸಿದ್ದಾರೆ.

ಕರ್ನಾಟಕದ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಂದರಲ್ಲೇ ಸುಮಾರು 1 ಲಕ್ಷಕ್ಕೂ ಹೆಚ್ಚು ಮತದಾರರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವುದಾಗಿ ಲೋಕಸಭೆ ವಿರೋಧ ಪಕ್ಷದ  ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದರು. ಅವರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.

ಅತ್ತ ಬಿಹಾರದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಚುನಾವಣಾ ಆಯೋಗ ಸುಮಾರು 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

More articles

Latest article