ಬೆಂಗಳೂರು: ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದಲ್ಲಿ ಸಚಿವ ಕೆಎನ್ ರಾಜಣ್ಣ ವಜಾ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಗಳನ್ನು ಕುರಿತು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಇಂದು 15 ವಿಧೇಯಕಗಳನ್ನು ಮಂಡಿಸಲಾಗಿದೆ. ಸಚಿವರಾದ ಡಾ. ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಡಿ.ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾನೂನು ಸಚಿವ ಎಚ್ ಕೆ ಪಾಟೀಲ್ ವಿವಿಧ ಇಲಾಖೆಗೆ ಸಂಬಂಧಿಸಿದ 16 ವಿಧೇಯಕಗಳನ್ನು ಮಂಡಿದ್ದಾರೆ.
ಮಂಡನೆಯಾದ 15 ವಿಧೇಯಕಗಳು:
- 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಧೇಯಕ
- 2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.