ನವದೆಹಲಿ: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
1xBet ಹೆಸರಿನ “ಅಕ್ರಮ” ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ 38 ವರ್ಷದ ರೈನಾ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಇಡಿ ಮೂಲಗಳು ತಿಳಿಸಿವೆ.
ರೈನಾ ಅವರು ‘1xBet’ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.