‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಮುಂದಾಗಿದೆ ಎಂದು ಇಂಡಿಯಾ ಒಕ್ಕೂಟದ ಮೂಲಗಳು ತಿಳಿಸಿವೆ.
ಮುಖ್ಯ ಚುನಾವಣಾ ಆಯುಕ್ತರ ಜ್ಞಾನೇಶ್ ಕುಮಾರ್ ವಿರುದ್ದ ಪದಚ್ಯುತಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಮುಂದಾಗಿದೆ ಎಂದು ವರದಿಯಾಗಿದೆ.
ಇಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ನಡೆದ ಸಭೆಯಲ್ಲಿ ಇಂಡಿಯಾ ಒಕ್ಕೂಟದ ಎಲ್ಲಾ ನಾಯಕರು ಪದಚ್ಯುತಿ ನಿರ್ಣಯ ಮಂಡನೆ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಈ ಸಂಬಂಧ ಪದಚ್ಯತಿ ನಿರ್ಣಯ ಕುರಿತು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಖಚಿತಪಡಿಸಿದ್ದಾರೆ.
ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಮತ ಕಳ್ಳತನ ಆರೋಪಕ್ಕೆ ರಾಹುಲ್ ಗಾಂಧಿಯವರು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲವೇ ಅವರ ಆರೋಪಗಳನ್ನು ಆಧಾರರಹಿತ
ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಪಾದಿಸಿದ್ದಾರೆ.