ಒಳ ಮೀಸಲಾತಿ ವರದಿ ಜಾರಿಗೆ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟ ಆಗ್ರಹ

Most read

ಬೆಂಗಳೂರು: ಒಳ ಮೀಸಲಾತಿ ಕುರಿತ ನ್ಯಾ. ನಾಗಮೋಹನ ದಾಸ್ ಸಮಿತಿ ನೀಡಿರುವ ವರದಿಯನ್ನು ಕೂಡಲೇ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಾಂತರಾಜು ಅವರು ಸರ್ಕಾರಕ್ಕೆ ಪತ್ರ ಬರೆದಿದ್ದು, ಅಲೆಮಾರಿ ಸಮುದಾಯಗಳ ಬವಣೆಗಳನ್ನು ವಿವಿರಿಸಿ ಆ ಸಮುದಾಯಗಳ ಹಿತದೃಷ್ಟಿಯಿಂದ ಕಾಲ ವಿಳಂಬ ಮಾಡದೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕವು ಶತಮಾನಗಳ ಕಾಲದಿಂದಲೂ ಸಾಮಾಜಿಕ ನ್ಯಾಯದ ಪರ ನಿಲವಿನ ಮೂಲಕೇಂದ್ರವಾಗಿದೆ. ಮನುಷ್ಯ ಜಾತಿ ತಾನೊಂದೇ ಕುಲಂಎಂದು ಆದಿಕವಿ ಪಂಪ ಇಲ್ಲಿ ಹೇಳಿದ್ದರೆ, ನಮ್ಮ ಕಾಲದ ರಾಷ್ಟ್ರಕವಿ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟಎಂದು ನಮ್ಮ ನಾಡನ್ನು ಬಣ್ಣಿಸಿದ್ದಾರೆ. 12ನೆ ಶತಮನದ ಬಸವ-ಅಲ್ಲಮ-ಅಕ್ಕಮಹಾದೇವಿ ಆದಿ ಶರಣರು ಸಕಲ ಜೀವರಾಶಿಯ ಹಿತವನ್ನು ಬಯಸುವ ಸಂದೇಶವನ್ನು ನಮಗೆ ನೀಡಿದ್ದಾರೆ.

ಆಧುನಿಕ ಕಾಲದಲ್ಲಿ ಕರ್ನಾಟಕವು ಸಾಮಾಜಿಕ ನ್ಯಾಯದ ಮುಖ್ಯ ನೆಲೆಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಮುಂತಾದಿ ನೂರಾರು ಮುತ್ಸದ್ದಿಗಳು ನಮ್ಮ ನಾಡಿನಲ್ಲಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದಿದ್ದಾರೆ. ಆದರೆ

ಇತ್ತೀಚಿನ ವರ್ಷಗಳಲ್ಲಿ ನಮ್ಮ ರಾಜ್ಯದಲ್ಲಿ ಸಂವಿಧಾನಬದ್ಧ ಮೀಸಲಾತಿ ಯಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವುದು ನ್ಯಾಯಎಂಬ ಕೂಗು ಕೇಳಿ ಬರುತ್ತಿದೆ. ಈ ವಿಷಯದಲ್ಲಿ ಎದುರಾದ ಕಾನೂನಿನ ತೊಡಕನ್ನು ಆಗಸ್ಟ್ 1, 2024ರಂದು ಸುಪ್ರೀಂ ಕೋರ್ಟು ನೀಡಿದ ತೀರ್ಪು ಬಗೆಹರಿಸಿದೆ. ತದನಂತರ ಕರ್ನಾಟಕ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ, ಸತ್ಯಕ್ಕೆ ಹತ್ತಿರವಾದ ಅಂಕಿ-ಸಂಖ್ಯೆಗಳನ್ನು ಸಂಗ್ರಹಿಸಿ, ಒಳಮೀಸಲಾತಿ ಯನ್ನು ಹೇಗೆ ನ್ಯಾಯವಾಗಿ ಹಂಚಿಕೆ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ತಡ ಮಾಡದೆ, ನ್ಯಾ. ನಾಗಮೋಹ ದಾಸ್ ಅವರ ಆಯೋಗದ ವರದಿಯನ್ನು ಸಮರ್ಪಕವಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯವಾದ ಕ್ರಮವನ್ನು ಕೈಗೊಳ್ಳಬೇಕು ಎಂದೂ ಒಕ್ಕೂಟವು ಆಗ್ರಹಪಡಿಸಿದೆ.

More articles

Latest article