ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಈ ಮಾಹಿತಿ ನೀಡಿದರು.
ಬಾನು ಮುಷ್ತಾಕ್ ಅವರ ಕೃತಿ ʼಎದೆಯ ಹಣತೆʼಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ . ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.
ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.