ಮತದಾರರ ಅಧಿಕಾರ ಯಾತ್ರೆ: ಬಿಹಾರದಲ್ಲಿ ರಾಹುಲ್ ಗೆ ಜತೆಯಾದ ಪ್ರಿಯಾಂಕಾ ಗಾಂಧಿ; ಹೆಚ್ಚಿದ ಉತ್ಸಾಹ

Most read

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್)‌ಯನ್ನು ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ ಅಧಿಕಾರ ಯಾತ್ರೆಗೆ ಅವರ ಸಹೋದರಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿಕೊಂಡಿದ್ದಾರೆ.

ಇಂದು ಬಿಹಾರದ ಸುಪೌಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಅವರು ಭಾಗಿಯಾದರು.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇಂಡಿಯಾ ಒಕ್ಕೂಟದ ಪಕ್ಷಗಳ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.

ಪ್ರತಿಭಟನಾ ಸಮಾವೇಶದುದ್ದಕ್ಕೂ ಮಾತನಾಡಿದ ರಾಹುಲ್‌ ಗಾಂಧಿ ಅವರು, ಇಂಡಿಯಾ ಬಣವು ಬಿಹಾರ ವಿಧಾನಸಭಾ ಚುನಾವಣೆಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಎಲ್ಲ ಪಕ್ಷಗಳೂ  ಒಗ್ಗಟ್ಟಿನಿಂದ ಕೆಲಸ ಮಾಡಲಿವೆ. ಈ ಬಾರಿ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್‌ ಗಾಂಧಿ, ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮೂಲಕ ಬಿಜೆಪಿಗೆ ಚುನಾವಣಾ ಆಯೋಗ ಸಹಾಯ ಮಾಡುತ್ತಿದೆ ಎಂದೂ ಆರೋಪ ಮಾಡಿದರು.

More articles

Latest article