ಬಿಹಾರದಲ್ಲಿ ರಾಹುಲ್‌ ಗಾಂಧಿ ನಡೆಸುತ್ತಿರುವ ಮತ ಅಧಿಕಾರ ಯಾತ್ರೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಭಾಗಿ

Most read

ಬೆಂಗಳೂರು: ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಹಮ್ಮಿಕೊಂಡಿರುವ  ಮತ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್ ಪುರ ವಿಮಾನ ನಿಲ್ದಾಣದಲ್ಲಿ ಇಳಿದು ಅವರು ಬಿಹಾರದ ಗೋಪಾಲ್ ಗಂಜ್ ಗೆ ರಸ್ತೆ ಮಾರ್ಗವಾಗಿ ಪ್ರಯಾಣ ಬೆಳೆಸಿದರು.

ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಭರ್ಜರಿ ಸ್ವಾಗತ ಕೋರಿದರು.

ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಜಮೀರ್ ಅಹಮದ್ಸತೀಶ್ ಜಾರಕಿಹೊಳಿ, ಡಾ. ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜತೆಯಾಗಿದ್ದಾರೆ.

More articles

Latest article