Saturday, August 30, 2025

ಸಾಮೂಹಿಕ ಗಣೇಶ ವಿಸರ್ಜನೆ: ಬೆಂಗಳೂರಿನಲ್ಲಿಇಂದು ನಾಳೆ ಮದ್ಯ ಮಾರಾಟ ನಿಷೇಧ

Most read

ಬೆಂಗಳೂರು: ಬೆಂಗಳೂರು ನಗರದಲ್ಲಿಇಂದು ಮತ್ತು ನಾಳೆ ಅಪಾರ ಪ್ರಮಾಣದಲ್ಲಿ ಗಣೇಶಮೂರ್ತಿಗಳ ಸಾಮೂಹಿಕ ವಿಸರ್ಜನಾ ಕಾರ್ಯಕ್ರಮಗಳು ಇರುವುದರಿಂದ ಕೆಲವು ಭಾಗಗಳಲ್ಲಿ ಇಂದು ಮತ್ತು ನಾಳೆ (ಆಗಸ್ಟ್ 30 ಮತ್ತು 31) ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದ ಕೆಲವು ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಿಎಲ್-4 ಮತ್ತು ಸಿಎಲ್-6 ಪರವಾನಗಿ ಹೊರತುಪಡಿಸಿ, ಉಳಿದ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ ಗಳು, ವೈನ್‌ಶಾಪ್‌ ಗಳು, ಪಬ್‌ ಗಳು, ಎಂ.ಎಸ್.ಐ.ಎಲ್ ಮಳಿಗೆಗೆಳು ಸೇರಿ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿ ಮುಚ್ಚಲು ಆದೇಶ ನೀಡಿದ್ದಾರೆ. ಆದರೆ ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.

ಆರ್‌.ಟಿ.ನಗರ, ಜೆ.ಸಿ.ನಗರ, ಸಂಜಯ ನಗರ, ಹೆಬ್ಬಾಳ, ಡಿ.ಜಿ.ಹಳ್ಳಿ, ಭಾರತಿನಗರ, ಪುಲಕೇಶಿನಗರ, ಯಲಹಂಕ, ಯಲಹಂಕ ಉಪನಗರ, ಕೊಡಿಗೇಹಳ್ಳಿ, ವಿದ್ಯಾರಣ್ಯಪುರ, ಚಂದ್ರಾ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್‌ 30ರ ಬೆಳಿಗ್ಗೆ 6 ರಿಂದ ಆಗಸ್ಟ್‌ 31ರ ಬೆಳಿಗ್ಗೆ 6ರವರೆಗೆ ಮದ್ಯ ಮಾರಾಟ ಇರುವುದಿಲ್ಲ.

ತಲಘಟ್ಟಪುರ, ಸುಬ್ರಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು ಹಾಗೂ ಎಲೆಕ್ಟ್ರಾನಿಕ ಸಿಟಿ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 31ರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತೀನಗರ, ಪುಲಕೇಶಿನಗರ, ಹಲಸೂರು, ಕೊತ್ತನೂರು, ಅಮೃತಹಳ್ಳಿ, ಸಂಪಿಗೆಹಳ್ಳಿ, ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌.ಎಂ.ಸಿ.ಯಾರ್ಡ್‌, ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 31ರ ಬೆಳಿಗ್ಗೆ 6ರಿಂದ ಸೆಪ್ಟೆಂಬರ್1ರ ಬೆಳಿಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

More articles

Latest article