ಬಿಆರ್‌ಎಸ್‌ ಪಕ್ಷದಿಂದ ಕೆ ಕವಿತಾ ಅಮಾನತು; ಪುತ್ರಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಕೆಸಿಆರ್‌

Most read

ಹೈದರಾಬಾದ್‌: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಅಡಿಯಲ್ಲಿ ವಿಧಾನಪರಿಷತ್‌ ಸದಸ್ಯೆ ಕೆ.ಕವಿತಾ ಅವರನ್ನು ಭಾರತ ರಾಷ್ಟ್ರ ಸಮಿತಿ (ಬಿ ಆರ್‌ ಎಸ್‌) ಪಕ್ಷದಿಂದ ಅಮಾನತು ಮಾಡಲಾಗಿದೆ.

ಕವಿತಾ ಅವರ ಇತ್ತೀಚಿನ ಹೇಳಿಕೆಗಳು ಪಕ್ಷಕೆ ಧಕ್ಕೆ ತರುವಂತ್ತಿದ್ದು ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಅಮಾನತು ಮಾಡಿ ಬಿ ಆರ್‌ ಎಸ್‌ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್‌ ಆದೇಶ ನೀಡಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ  ಟಿ.ರವೀಂದರ್ ರಾವ್‌ ಮತ್ತು ಸೋಮ ಭರತ್‌ ಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಿಳಿಸಿದ್ದಾರೆ.

ಕವಿತಾ ಅವರು ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್‌ ಅವರ ಪುತ್ರಿಯಾಗಿದ್ದಾರೆ. ಆದರೂ ಅವರ ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

ಕವಿತಾ ಅವರನ್ನು ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ್ದು ಅವರು ಹೊರಗಿದ್ದಾರೆ.

More articles

Latest article