ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಿತ್ರನಟ ದರ್ಶನ್ ತೂಗುದೀಪ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ 64ನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲೂ ಸಮ್ಮತಿಸಿದೆ.
ಆರೋಪಿಯ ಸುರಕ್ಷತೆ ದೃಷ್ಟಿಯಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕು. ಜಾಮೀನು ರದ್ದುಗೊಳಿಸಿದ ಆದೇಶದಲ್ಲಿ ಸುಪ್ರೀಂ ಕೋರ್ಟ್, ಆರೋಪಿ ದರ್ಶನ್ ಹಿಂದೆ ಇದ್ದ ಪರಪ್ಪನ ಅಗ್ರಹಾರ ಜೈಲಿನ ಪರಿಸ್ಥಿತಿ ಗಮನಿಸಿದೆ. ದರ್ಶನ್ ಸೆಲೆಬ್ರಿಟಿಯಾಗಿದ್ದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದಿಸಿದ್ದರು.
ಸರ್ಕಾರದ ಪರವಾಗಿ ವಾದಿಸಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು. ಇಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆದೇಶ ನೀಡಿದೆ. ಜತೆಗೆ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು, ಜೈಲಿನ ಆವರಣದಲ್ಲಿ ಓಡಾಡಲು ದರ್ಶನ್ ಗೆ ಅನುಮತಿ ನೀಡಲಾಗಿದೆ.