ಧರ್ಮಸ್ಥಳ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್, ಯೂಟ್ಯೂಬರ್ ಮುನಾಫ್ ಮತ್ತು ಮಟ್ಟಣ್ಣವರ್
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್ ಐಟಿ ಹಲವು ಆಯಾಮಗಳಿಂದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರನ್ನೂ ತನಿಖೆಗೆ ಒಳಪಡಿಸಿದೆ. ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಮತ್ತಿತರರು ವಿಚಾರಣೆ ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್ ಟಿ. ನಾನು ಎಸ್ ಐಟಿ ಮುಂದೆ ನನಗೆ ಗೊತ್ತಿರುವ ಎಲ್ಲ ಮಾಹಿತಿಯನ್ನೂ ಹೇಳುತ್ತೇನೆ. ಎಸ್ ಐಟಿ ತನಿಖೆಯಿಂದ ಸತ್ಯ ಹೊರಬರುವ ವಿಶ್ವಾಸ ಇದೆ. ಅಧಿಕಾರಿಗಳು ನನ್ನ 3 ಮೊಬೈಲ್ ವಶಕ್ಕೆ ಪಡೆದಿದ್ದಾರೆ. ನನ್ನನ್ನು ಕೆಲವರು ಫಾಲೋ ಮಾಡ್ತಿದ್ದರು. ಆ ವಿಷಯವನ್ನೂ ತಿಳಿಸಿದ್ದೇನೆ. ಸೆಕ್ಷನ್ 161 ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮನಾಫ್ 3ನೇ ದಿನದ ವಿಚಾರಣೆಗೆ ಮತ್ತು ಗಿರೀಶ್ ಮಟ್ಟಣ್ಣವರ್ 6ನೇ ದಿನದ ವಿಚಾರಣೆಗೆ ಹಾಜರಾಗಿದ್ದಾರೆ.
ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಜಯಂತ್ ಟಿ., ಕೇರಳ ಮೂಲದ ಯೂಟ್ಯೂಬರ್ ಮುನಾಫ್, ‘ಯುನೈಟೆಡ್ ಮಿಡಿಯಾ ಯೂಟ್ಯೂಬ್ ಚಾನೆಲ್‌ನ ಅಭಿಷೇಕ್, ಚಿನ್ನಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ ಚಿನ್ನಯ್ಯ ಪೊಲೀಸರಿಗೆ ಹಸ್ತಾಂತರಿಸಿದ್ದ ಬುರುಡೆಯನ್ನು ಹೊರತೆಗೆದಿದ್ದ ಸ್ಥಳವನ್ನು ತೋರಿಸಿದ್ದ ವಿಠಲ ಗೌಡ, ಸ್ಥಳೀಯ ನಿವಾಸಿ ಪ್ರದೀಪ್ ಅವರನ್ನೂ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದ್ದು ಮಹತ್ವದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಮುನಾಫ್, ದೂರುದಾರ ಚಿನ್ನಯ್ಯ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ನಂತರವಷ್ಟೇ ನಾನು ನನ್ನ ಯೂಟ್ಯೂಬ್ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊ ಪ್ರಸಾರ ಮಾಡಿದ್ದೆ. ಆ ದೃಶ್ಯಗಳನ್ನು ನನ್ನದೇ ಮೊಬೈಲ್ ನಲ್ಲೇ ಚಿತ್ರೀಕರಿಸಿದ್ದೆ ಎಂದರು.
ಎಸ್‌ಐಟಿ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿದೆ ಎಂಬ ವಿಶ್ವಸ ಇದೆ. ಬುರುಡೆ ಪತ್ತೆ ವಿಷಯದ ಜತೆಗೆ ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯದಲ್ಲಿ ನೀಡಿದ್ದ ಹೇಳಿಕೆ ಕುರಿತೂ ತನಿಖೆ ನಡೆಸುತ್ತಿದೆ.
ಬುರುಡೆಯನ್ನು ಹೊರತೆಗೆದಿದ್ದ ಸಂದರ್ಭದಲ್ಲಿ ನಾನು ಕಾಡಿನಲ್ಲಿ ಇದ್ದೆ ಇರಲಿಲ್ಲ ಎಂಬ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನನಗೆ ತಿಳಿದ ಎಲ್ಲಾ ಮಾಹಿತಿಯನ್ನು ಎಸ್ ಐಟಿ ಮುಂದೆ ತಿಳಿಸುತ್ತೇನೆ. ನಾನು ಸೌಜನ್ಯಾ ಪರ ಹೋರಾಟಗಾರರ ಜತೆ ಗುರುತಿಸಿಕೊಂಡಿದ್ದೆನೆ. ಭಯ ಪಡುವ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎಲ್ಲಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್ ಐಟಿ ಹಲವು ಆಯಾಮಗಳಿಂದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರನ್ನೂ ತನಿಖೆಗೆ ಒಳಪಡಿಸಿದೆ. ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಮತ್ತಿತರರು ವಿಚಾರಣೆ ವಿಚಾರಣೆ ನಡೆಸುತ್ತಿದ್ದಾರೆ.