ಸತೀಸ್‌ ಸೈಲ್‌ ಬಂಧನ; ಕೈ ಶಾಸಕರನ್ನು ಇಡಿ ಗುರಿಯಾಗಿಸಿಕೊಂಡಿದೆ: ಡಿಕೆ ಶಿವಕುಮಾರ್‌

Most read

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಟೀಕಿಸಿದ್ದಾರೆ.

ಸತೀಶ್ ಸೈಲ್ ಅವರನ್ನು ಬಂಧಿಸುವ ಅಗತ್ಯವೇ ಇರಲಿಲ್ಲ. ಕಾಂಗ್ರೆಸ್ ಶಾಸಕ ಎಂಬ ಕಾರಣಕ್ಕೆ ಸೈಲ್‌ ಅವರನ್ನು ಗುರಿಯಾಗಿಸಿಕೊಂಡು ಬಂಧಿಸಲಾಗಿದೆ. ನಮ್ಮನ್ನು ಗುರಿಯಾಗಿಸಿಕೊಳ್ಳಲು ಅವರು ಬೇಕಾದ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಕಬ್ಬಿಣದ ಅದಿರು ಕಳವು ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಸತೀಶ್‌ ಸೈಲ್‌ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ಜಪ್ತಿ ಮಾಡಿ ಸಂಗ್ರಹಿಸಿ ಇಡಲಾಗಿದ್ದ ಸಾವಿರಾರು ಟನ್‌ ಕಬ್ಬಿಣದ ಅದಿರನ್ನುಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸತೀಶ್‌ ಸೈಲ್‌ ಗೆ ಹಲವು ಬಾರಿ ಸಮನ್ಸ್‌ ನೀಡಿದ್ದರೂ  ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಆದ್ದರಿಂದ ಅವರನ್ನು ಇಡಿ ಬಂಧಿಸಿದೆ. ಇಂದು ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.

More articles

Latest article