ಬೆಂಗಳೂರು: ವಿಧಾನ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಸಚಿವರು ಶಾಸಕರು ಭಾಗವಹಿಸಿದ್ದರು.