ಸ್ಥಳೀಯ ಸಂಸ್ಥೆ ಚುನಾವಣೆ: ಮತಪತ್ರ ಬಳಕೆ ಕಾನೂನು ಜಾರಿಗೆ ತಂದಿದ್ದು ಬಿಜೆಪಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣಾ ಆಯೋಗದ ಕಾಯ್ದೆಯ ಉಪಬಂಧದಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ ಜಾರಿಗೊಳಿಸುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇವೆ. ಇಷ್ಟಕ್ಕೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡಿದರೆ ತಪ್ಪೇನು ಎಂದು ಮರುಪ್ರಶ್ನೆ ಹಾಕಿದರು.

More articles

Latest article

Most read