ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿ ನಂತರ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು. 60 ವರ್ಷ ತುಂಬಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಂತೋಷವಾಗುತ್ತಿದೆ. ಭದ್ರೆ ನದಿ ತುಂಬಿದರೆ, ರೈತರ ಜೀವನ ಸುಗಮವಾಗಲಿದೆ ಎಂದೂ ಶಿವಕುಮಾರ್ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ನಲ್ಲಿ ರೂ.5300 ಕೋಟಿ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಆ ಹಣ ಬಿಡುಗಡೆ ಆಗಿಲ್ಲ ಎಂದರು.
ಕಳಸಾ ಬಂಡೂರಿ, ಮೇಕೆದಾಟು ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಿಲ್ಲ. ಈ ಸಂಬಂಧ ಹತ್ತಾರು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದ್ದರಿಂದ ರಾಜ್ಯದ ಜನರೇ ದರೆ, ಬಿಜೆಪಿಯ ಸಂಸದರ ಮೇಲೆ ಒತ್ತಡ ಹೇರಬೇಕು. ಆಗಲಾದರೂ ಬಿಜೆಪಿ ಸಂಸದರು ಕೆಲಸ ಮಾಡಬಹುದು ಎಂದರು.