ದಸರಾ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಬಿಜೆಪಿ ಲೀಡರ್‌ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

Most read

ಮೈಸೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.

ಮಾಜಿ ಸಂಸದ ಪ್ರತಾಪ್‌ ಸಿಂಹ,  ಟಿ.ಗಿರೀಶ್ ಕುಮಾರ್ ಹಾಗೂ ಎಚ್‌ ಎಸ್‌ ಗೌಡರ್ 3 ಪಿಐಎಲ್ ಗಳನ್ನು ಸಲ್ಲಿಸಿದ್ದರು. ಇವರ ಪರವಾಗಿ ವಕೀಲ ಸುದರ್ಶನ್ ವಾದ ಮಂಡಿಸಿದ್ದರು. ಬಾನು ಮುಷ್ತಾಕ್ ಹಿಂದೂ ವಿರೋಧಿ ಮಾತುಗಳನ್ನಾಡಿದ್ದಾರೆ. ಭುವನೇಶ್ವರಿ, ಕುಂಕುಮ ಮತ್ತು  ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ಅವರ ಧರ್ಮದಲ್ಲಿ ಮೂರ್ತಿ ಪೂಜೆ ಇಲ್ಲ. ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರಿಗೆ ಸರ್ಕಾರ ನೀಡಿದ್ದ ಆಹ್ವಾನವನ್ನು ಹಿಂಪಡೆಯಬೇಕು ಎಂದು ವಾದಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಷಯದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡು ಬರುವುದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ.

More articles

Latest article