ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಭಾರತ ರತ್ನ ಪುರಸ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸಿದ ಮೈಸೂರಿನ ವಿಶ್ವ ಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಸಿಪಿಕೆ, ಹಂಪನಾ, ಕೆ.ಎಸ್.ಭಗವಾನ್ ಸೇರಿ ಹಲವರು ನಿಯೋಗದಲ್ಲಿದ್ದರು