ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್;‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.  

ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದೂ ಅವರು ತಮ್ಮ ಎಕ್ಸ್‌ ಸಂದೇಶದಲ್ಲಿ ತಿಳಿಸಿದ್ದಾರೆ.

More articles

Latest article