ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ಅರ್ಜಿ ವಜಾ; ಕೋಮುವಾದಿ ಬಿಜೆಪಿಗೆ ಮುಖಭಂಗ; ಪ್ರಿಯಾಂಕ್‌ ಖರ್ಗೆ

Most read

ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಪಿಐಎಲ್‌ ಅನ್ನು ವಜಾಗೊಳಿಸಿದ್ದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.  

 “ಧರ್ಮ ನಿರಪೇಕ್ಷತೆ“ ನಮ್ಮ ಸಂವಿಧಾನದಲ್ಲಿ ಮೂಲಭೂತವಾಗಿರುವ ತತ್ವ. ಸಂವಿಧಾನದತ್ತವಾಗಿ ಆಯ್ಕೆಯಾದ ಸರ್ಕಾರದ ನಿರ್ಧಾರಗಳು ಹಾಗೂ ಆಚರಣೆಗಳು ಧರ್ಮ ನಿರಪೇಕ್ಷತೆಯಿಂದ ಕೂಡಿರಬೇಕಾಗುತ್ತದೆ.

ಹೈಕೋರ್ಟ್‌ ಅಷ್ಟೇ ಅಲ್ಲ ಸುಪ್ರೀಂ ಕೋರ್ಟ್ ಕೂಡ ಕೋಮುವಾದದ ಪ್ರತಿಪಾದಕರಿಗೆ ಮುಖಭಂಗ ಮಾಡಿದೆ.

ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದ್ದು ಅರ್ಜಿ ವಿಚಾರಣೆಯನ್ನಷ್ಟೇ ಅಲ್ಲ, ಕೋಮುವಾದದ ನಿರಾಕರಣೆ, ದ್ವೇಷದ ನಿರಾಕರಣೆ, ಸಂವಿಧಾನ ವಿರೋಧಿ ನೀತಿಯ ನಿರಾಕರಣೆ, ಮಹಿಳಾ ವಿರೋಧಿತನದ ನಿರಾಕರಣೆ, ಮನುವಾದದ ನಿರಾಕರಣೆ,

ಸುಪ್ರೀಂ ಕೋರ್ಟ್ ಅರ್ಜಿದಾರರ ವಾದವನ್ನೇ ಕೇಳಲು ತಯಾರಿಲ್ಲದೆ, ವಿಚಾರಣೆಗೂ ಮನ್ನಣೆ ನೀಡದೆ ಸ್ಪಷ್ಟವಾಗಿ ಕೋಮು ಪ್ರತಿಪಾದನೆಯನ್ನು ಎತ್ತಿ ಬಿಸಾಡಿದೆ.

ಇನ್ನಾದರೂ ಬಿಜೆಪಿಗರಿಗೆ ಜ್ಞಾನೋದಯವಾಗಲಿ, ಸಂವಿಧಾನದ ಆಶಯ ಅರಿವಾಗಲಿ ಎಂದು ತಿವಿದಿದ್ದಾರೆ.

More articles

Latest article