ಕಾಲೇಜಿನಲ್ಲಿ ಸ್ವಯಂಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಲೈಂಗಿಕ ದೌರ್ಜನ್ಯ ಆರೋಪ

Most read

ನವದೆಹಲಿ: ಲೈಂಗಿಕ ದೌರ್ಜನ್ಯ ಕೇಳಿ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ ಮೆಂಟ್ ಸಂಸ್ಥೆಯ ವ್ಯವಸ್ಥಾಪಕ ಸ್ವಯಂಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥಸಾರಥಿ ದೆಹಲಿ ಪೊಲೀಸರು ಎಫ್‌ ಐ ಆರ್‌ ದಾಖಲಿಸಿಕೊಂಡಿದ್ದಾರೆ.

ಈತನ ವಿರುದ್ಧ  ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರಿಸಿ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ  ಚೈತನ್ಯಾನಂದ ಸರಸ್ವತಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾದ 16 ಮಂದಿ ಸಂತ್ರಸ್ತ ವಿದ್ಯಾರ್ಥಿನಿಯರು ಹೇಳಿಕೆ ದಾಖಲಿಸಿದ್ದಾರೆ. ವಿದ್ಯಾಸಂಸ್ಥೆಯ ನೆಲಮಹಡಿಯಲ್ಲಿ ಚೈತನ್ಯಾನಂದ ಬಳಸುತ್ತಿದ್ದ ನಕಲಿ ನಂಬರ್ ಪ್ಲೇಟ್‌ ನ ವೊಲ್ಲೊ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಎದುರು ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದ ಅಡಿಯಲ್ಲಿ ಪಿಜಿ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್ (ಪಿಜಿಡಿಎಂ)   ವ್ಯಾಸಂಗ ಮಾಡುತ್ತಿರುವ ಚೈತನ್ಯಾನಂದ ತಮ್ಮ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸ್ವಾಮೀಜಿಯಷ್ಟೇ ಅಲ್ಲದೆ ಕೆಲವು ಅಧ್ಯಾಪಕರು ಮತ್ತು ಆಡಳಿತ ಮಂಡಳಿ ಸದಸ್ಯರೂ ಸಹ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article