ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ನಿಗದಿತ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳಿಸುತ್ತೇವೆ. ರಾಜ್ಯದ ಕೆಲವು ಭಾಗಗಳಲ್ಲಿ ಸಮೀಕ್ಷೆಗೆ ಸರ್ವರ್ ಅಡ್ಡಿಯಾಗುತ್ತಿದೆ. ಅಧಿಕಾರಿಗಳ ಜತೆ ಚರ್ಚಿಸಿ ತ್ವರಿತವಾಗಿ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದೂ ಹೇಳಿದರು.
ಸಮೀಕ್ಷೆಗೆ ಯಾವೊಬ್ಬ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಬದಲಾಗಿ ಕೇವಲ ಸಲಹೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ ಅವರು, ಸಮೀಕ್ಷೆಯನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿದ್ದು, ಯಾವುದೇ ರೀತಿಯ ಆದೇಶ ಬಂದೂ ಪಾಲಿಸುತ್ತೇವೆ. ಕಾನೂನು ಪಾಲನೆ ಮಾಡುವುದು ಸರಕಾರದ ಕರ್ತವ್ಯ ಎಂದರು.