ಮಾಲೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

Most read

ಮಾಲೂರು: ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಧಾರುಣ ಘಟನೆ ಮಾಲೂರು ತಾಲ್ಲೂಕಿನ  ಬ್ಯಾಟರಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವದ ಕಾರಣ ತಿಳಿದು ಬಂದಿಲ್ಲ.

ಮಾಲೂರು ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿ ಸತೀಶ (18 ) ಹಾಗೂ ಪಡಮಾಕಲಹಳ್ಳಿ ಶ್ವೇತ (17) ಆತ್ಮಹತ್ಯೆಗೆ ಶರಣಾದ ದುರ್ದೈವಿ ಪ್ರೇಮಿಗಳು. ಬೈಕ್‌ ನಲ್ಲಿ ತೆರಳಿದ ಇವರು ಬ್ಯಾಟರಾಯನಹಳ್ಳಿ ರೈಲ್ವೆ ಹಳಿಯ ಸಮೀಪ ಬೈಕ್ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

More articles

Latest article