ಮೈಸೂರಿನಲ್ಲೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Most read

ಬೆಂಗಳೂರು: ನಿನ್ನೆ ನೀಧನ ಹೊಂದಿದ ಖ್ಯಾತ ಕಾದಂಬರಿಕಾರ ಎಸ್.ಎಲ್ ಬೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದರು.

ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರು ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು, ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು ಎಂದರು.

ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ  ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ:

ಬೈರಪ್ಪನವರೊಂದಿಗೆ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿಸಾಹಿತ್ಯ ಹಾಗೂ ಸ್ನೇಹ ಬೇರೆಯಾಗಿದ್ದು, ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಉತ್ತಮ ಬಾಂಧವ್ಯವಿತ್ತು ಎಂದರು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಎಂದು ತಿಳಿಸಿದರು.

More articles

Latest article