ಜಾತಿ ಗಣತಿ: ತಡೆಯಾಜ್ಞೆ ನೀಡಲು ಹೈಕೋರ್ಟ್‌ ನಕಾರ; ಆದರೆ ಷರತ್ತುಗಳು ಅನ್ವಯ

Most read

ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿಯನ್ನು ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ದ್ವಿಸದಸ್ಯ  ಪೀಠ ಎರಡು ದಿನ ವಾದ ಪ್ರತಿವಾದ ಆಲಿಸಿತ್ತು. ಅಂತಿಮವಾಗಿ ಇಂದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ  ಸಾರ್ವಜನಿಕರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ.

ದತ್ತಾಂಶಗಳನ್ನು ಸರ್ಕಾರ ಸೇರಿದಂತೆ ಯಾರೂ ಬಹಿರಂಗಪಡಿಸುವಂತಿಲ್ಲ. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾರ ಮೇಲೂ ಒತ್ತಡ ಹೇರಬಾರದು ಎಂದು ಹೈಕೋರ್ಟ್ ಷರತ್ತುಗಳನ್ನು ವಿಧಿಸಿದೆ.

More articles

Latest article