ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮೂರನೇ ಹಾಗೂ ಅಂತಿಮ ನೋಟಿಸ್ ಜಾರಿ ಮಾಡಲಾಗಿದೆ.
ಶೋಧ ನಡೆಸುತ್ತಿದ್ದಾಗ ತಿಮರೋಡಿ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಎರಡು ನೋಟಿಸ್ ಜಾರಿ ಮಾಡಿದ್ದರು. ಆದರೆ ಮಹೇಶ್ ಶೆಟ್ಟಿ ತಿಮರೋಡಿ ನೋಟೀಸ್ ಸ್ವೀಕರಿಸಿರಲಿಲ್ಲ. ಆದ್ದರಂದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಂತಿಮ ನೋಟಿಸ್ ಜಾರಿ ಮಾಡಲಾಗಿದೆ.
ಸೆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಇಂದು ಬೆಳಗ್ಗೆ ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ. ಅಂದು ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಅವರ ಬಂಧನಕ್ಕೆ ಪೊಲೀಸರು ಕ್ರಮಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.